ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.
Cross references
ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.
ಆಗ ಮೋಶೆಯು ತನಗೆ ಕರ್ತನು ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.
ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.
ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.
ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.
ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.
ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.