Cross references
ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.
ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್ ಫಲ್ಲು ಹೆಚ್ರೋನ್ ಕರ್ವಿಾ; ಇವರೇ ರೂಬೇನನ ಗೋತ್ರಗಳು.
ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.
ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನನೂ ಕೆಹಾತನೂ ಮೆರಾರೀಯೂ.
ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ --
ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.
ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,
ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು.
ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.
ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು.
ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು.
ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.