Cross references
ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.
ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್,
ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ;
ಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ.
ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು.
ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,
ಇಸ್ಸಾಕಾರನ ಕುಮಾರರು--ತೋಲನು ಪೂವನುಯಾ ಶೂಬನು ಶಿಮ್ರೋನನುಈ ನಾಲ್ಕು ಮಂದಿ.
ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.