ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.
Cross references
ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.
ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು.
ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.
ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ.
ಅಡವಿ ಕತ್ತಿಯ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.
ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.