ಆದಿಕಾಂಡ 48:13 · ಕನ್ನಡ ಬೈಬಲ್
ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.
Cross references
ಆದಿಕಾಂಡ 41:51
ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
ಆದಿಕಾಂಡ 46:20
ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
ಅಂಕೆಗಳ ಪುಸ್ತಕ 26:28
ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ.
ಮತ್ತಾಯ 25:33
ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.