ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
Cross references
ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು.
ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
ಎಫ್ರಾಯಾಮ್‌ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು.
ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು.
ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.
ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.