ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು.
Cross references
ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್ ಅವರನ್ನು ಯೋಸೇಫನಿಗೆ ಹೆತ್ತಳು.
ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ್ದ ಕರ್ತನಾದ ನಾನು ಪರಿಶುದ್ಧನಾಗಿರುವದರಿಂದ ನೀವು ನನಗೆ ಪರಿಶುದ್ಧ ರಾಗಿರಬೇಕು.ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್‌ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್,
ಯೋಸೇಫನ ಮಕ್ಕಳಾದ ಎಫ್ರಾಯಾಮ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ.
ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು.
ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ
ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.
ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು.
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶ ವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾ ಗಿದೆ; ಯೋಸೇಫನಿಗೆ ಎರಡು ಪಾಲುಗಳು ಕೊಡಲ್ಪ ಟ್ಟಿದೆ.
ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.