ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
Cross references
ಹೆಬ್ರೋನಿನ ಹೆಸರು ಮೊದಲು ಕಿರ್ಯತ್‌ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್‌ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.