Home Bibles ಆದಿಕಾಂಡ 49:29 · ಕನ್ನಡ ಬೈಬಲ್
ಆದಿಕಾಂಡ 49:29 · ಕನ್ನಡ ಬೈಬಲ್

ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ

Cross references

ಆದಿಕಾಂಡ 15:15

ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.

ಆದಿಕಾಂಡ 23:9

ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.

ಆದಿಕಾಂಡ 23:20

ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.

ಆದಿಕಾಂಡ 25:8

ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.

ಆದಿಕಾಂಡ 25:9

ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.

ಆದಿಕಾಂಡ 35:27

ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್‌ ಎಂಬ ಅರ್ಬದ ಪಟ್ಟಣಕ್ಕೆ ಬಂದನು.

ಆದಿಕಾಂಡ 35:29

ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.

ಆದಿಕಾಂಡ 47:30

ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.

ಆದಿಕಾಂಡ 50:12

ಆಗ ಯಾಕೋಬನು ತನ್ನ ಕುಮಾರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.

ಆದಿಕಾಂಡ 50:13

ಅವನ ಕುಮಾರರು ಅವನನ್ನು ಕಾನಾನ್‌ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.

2 ಸಮುವೇಲ 19:37

ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು.

ರೋಮಾಪುರದವರಿಗೆ 12:6

ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.

ಹೆಬ್ರಿಯರಿಗೆ 12:23

ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ

Interlinear

Choose Theme