ಆದಿಕಾಂಡ 50:3 · ಕನ್ನಡ ಬೈಬಲ್
ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
Cross references
ಆದಿಕಾಂಡ 50:10
ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
ಅಂಕೆಗಳ ಪುಸ್ತಕ 20:29
ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
ದ್ವಿತೀಯೋಪದೇಶಕಾಂಡ 21:13
ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.
ದ್ವಿತೀಯೋಪದೇಶಕಾಂಡ 34:8
ಇಸ್ರಾಯೇಲ್ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.