ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್‌ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
Cross references
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ
ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.
ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ.
ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.
ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.