ಆದಿಕಾಂಡ 50:8 · ಕನ್ನಡ ಬೈಬಲ್
ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟರು.
Cross references
ನಿರ್ಗಮಕಾಂಡ 10:8
ಮೋಶೆ ಆರೋನರು ಫರೋಹನ ಬಳಿಗೆ ಮತ್ತೆ ಕರೆಯಲ್ಪಟ್ಟರು. ಆಗ ಅವರಿಗೆ--ನೀವು ಹೋಗಿ ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಿರಿ; ಆದರೆ ಹೋಗು ವವರು ಯಾರಾರು ಅಂದನು.
ನಿರ್ಗಮಕಾಂಡ 10:26
ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.
ಅಂಕೆಗಳ ಪುಸ್ತಕ 32:24
ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು.