Home Bibles ☰ Books ಆದಿಕಾಂಡ 50:9 · ಕನ್ನಡ ಬೈಬಲ್
ಆದಿಕಾಂಡ 50:9 · ಕನ್ನಡ ಬೈಬಲ್

ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.

Cross references

ಆದಿಕಾಂಡ 41:43

ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.

ಆದಿಕಾಂಡ 46:29

ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.

ನಿರ್ಗಮಕಾಂಡ 14:7

ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.

ನಿರ್ಗಮಕಾಂಡ 14:17

ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.

ನಿರ್ಗಮಕಾಂಡ 14:28

ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.

2 ಅರಸುಗಳು 18:24

ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?

ಪರಮಗೀತ 1:9

ಓ ನನ್ನ ಪ್ರಿಯಳೇ, ಫರೋಹನ ರಥಗಳಲ್ಲಿರುವ ಕುದುರೆಗಳ ಗುಂಪಿಗೆ ನಿನ್ನನ್ನು ಹೋಲಿಸಿದ್ದೇನೆ.

ಅಪೋಸ್ತಲರ ಕೃತ್ಯಗಳು 8:2

ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.

Interlinear

Choose Theme