ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
Cross references
ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.
ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.
ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ಓ ಕರ್ತನೇ, ನಾನು ನಿನಗೆ ಮೊರೆಯಿಟ್ಟರೂ ಎಷ್ಟರ ವರೆಗೆ ನೀನು ಕೇಳದೇ ಇರುವಿ? ಹಿಂಸೆ ಹಿಂಸೆ ಎಂದು ನಿನಗೆ ಕೂಗುತ್ತೇನೆ; ಆದರೆ ನೀನು ರಕ್ಷಿಸುವದಿಲ್ಲ.
ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.