ನೀನು ಗೋಫೆರ್ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು.
Cross references
ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.
ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.