Home Bibles ಆದಿಕಾಂಡ 6:2 · ಕನ್ನಡ ಬೈಬಲ್
ಆದಿಕಾಂಡ 6:2 · ಕನ್ನಡ ಬೈಬಲ್

ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.

Cross references

ಆದಿಕಾಂಡ 3:6

ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.

ಆದಿಕಾಂಡ 4:26

ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್‌ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.

ಆದಿಕಾಂಡ 12:11

ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ.

ಆದಿಕಾಂಡ 24:3

ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ

ಆದಿಕಾಂಡ 26:35

ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.

ಆದಿಕಾಂಡ 27:46

ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.

ಆದಿಕಾಂಡ 39:6

ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.

ನಿರ್ಗಮಕಾಂಡ 4:22

ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.

ನಿರ್ಗಮಕಾಂಡ 34:16

ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.

ದ್ವಿತೀಯೋಪದೇಶಕಾಂಡ 7:3

ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.

ದ್ವಿತೀಯೋಪದೇಶಕಾಂಡ 14:1

ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.

ಯೆಹೋಶುವ 23:12

ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ

2 ಸಮುವೇಲ 11:2

ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.

ಎಜ್ರಾ 9:1

ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್‌ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.

ಎಜ್ರಾ 9:12

ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.

ನೆಹೆಮ್ಯ 13:24

ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು.

ಯೋಬ 1:6

ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು.

ಯೋಬ 31:1

ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?

ಕೀರ್ತನೆಗಳು 82:6

ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.

ಯೆಶಾಯ 63:16

ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.

ಮಲಾಕಿ 2:11

ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.

ಮಲಾಕಿ 2:15

ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,

ಯೋಹಾನ 8:41

ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.

ರೋಮಾಪುರದವರಿಗೆ 9:7

ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.

1 ಕೊರಿಂಥದವರಿಗೆ 7:39

ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.

2 ಕೊರಿಂಥದವರಿಗೆ 6:14

ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?

2 ಕೊರಿಂಥದವರಿಗೆ 6:18

ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

2 ಪೇತ್ರ 2:14

ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.

1 ಯೋಹಾನ 2:16

ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.

Interlinear

Choose Theme