Home Bibles ಆದಿಕಾಂಡ 6:21 · ಕನ್ನಡ ಬೈಬಲ್
ಆದಿಕಾಂಡ 6:21 · ಕನ್ನಡ ಬೈಬಲ್

ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.

Cross references

ಆದಿಕಾಂಡ 1:29

ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.

ಆದಿಕಾಂಡ 1:30

ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.

ಯೋಬ 38:41

ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?

ಯೋಬ 40:20

ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ; ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ.

ಕೀರ್ತನೆಗಳು 35:6

ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.

ಕೀರ್ತನೆಗಳು 104:27

ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.

ಕೀರ್ತನೆಗಳು 136:25

ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಕೀರ್ತನೆಗಳು 145:16

ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.

ಕೀರ್ತನೆಗಳು 147:9

ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.

ಮತ್ತಾಯ 6:26

ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?

Interlinear

Choose Theme