ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
Cross references
ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;
ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು.
ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
(ಇದು ಸಹ ರಾಕ್ಷಸರ ದೇಶವೆನಿಸಿಕೊಂಡಿತು; ಪೂರ್ವದಲ್ಲಿ ರಾಕ್ಷಸರು ಅದರಲ್ಲಿ ವಾಸಮಾಡಿದರು; ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.
ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
ಆದರೆ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು.
ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.