Home Bibles ಆದಿಕಾಂಡ 6:8 · ಕನ್ನಡ ಬೈಬಲ್
ಆದಿಕಾಂಡ 6:8 · ಕನ್ನಡ ಬೈಬಲ್

ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.

Cross references

ಆದಿಕಾಂಡ 19:19

ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;

ನಿರ್ಗಮಕಾಂಡ 33:12

ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.

ಕೀರ್ತನೆಗಳು 84:11

ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.

ಕೀರ್ತನೆಗಳು 145:20

ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.

ಸಾಮೇತಿಗಳು 3:4

ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.

ಸಾಮೇತಿಗಳು 8:35

ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.

ಸಾಮೇತಿಗಳು 12:2

ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.

ಯೆರೆಮಿಯ 31:2

ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.

ಲೂಕ 1:30

ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;

ಅಪೋಸ್ತಲರ ಕೃತ್ಯಗಳು 7:46

ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.

ರೋಮಾಪುರದವರಿಗೆ 4:4

ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.

ರೋಮಾಪುರದವರಿಗೆ 11:6

ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.

1 ಕೊರಿಂಥದವರಿಗೆ 15:10

ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.

ಗಲಾತ್ಯದವರಿಗೆ 1:15

ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;

2 ತಿಮೋಥೆಯ 1:18

ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.

ತೀತ 2:11

ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

ತೀತ 3:7

ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.

ಹೆಬ್ರಿಯರಿಗೆ 4:16

ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

2 ಪೇತ್ರ 2:5

ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.

Interlinear

Choose Theme