Home Bibles ಆದಿಕಾಂಡ 7:13 · ಕನ್ನಡ ಬೈಬಲ್
ಆದಿಕಾಂಡ 7:13 · ಕನ್ನಡ ಬೈಬಲ್

ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್‌ ಹಾಮ್‌ ಯೆಫೆತ್‌ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.

Cross references

ಆದಿಕಾಂಡ 5:32

ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬವರು ಹುಟ್ಟಿದರು.

ಆದಿಕಾಂಡ 6:10

ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬ ಮೂವರು ಕುಮಾರರು ಹುಟ್ಟಿದರು.

ಆದಿಕಾಂಡ 6:18

ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.

ಆದಿಕಾಂಡ 7:1

ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.

ಆದಿಕಾಂಡ 7:7

ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು.

ಆದಿಕಾಂಡ 8:14

ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.

ಆದಿಕಾಂಡ 9:18

ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್‌ ಹಾಮ್‌ ಯೆಫೆತ್‌; ಹಾಮನು ಕಾನಾನನ ತಂದೆಯು.

ಆದಿಕಾಂಡ 10:1

ನೋಹನ ಕುಮಾರರಾದ ಶೇಮ್‌ ಹಾಮ್‌ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.

ಆದಿಕಾಂಡ 10:6

ಹಾಮನ ಕುಮಾರರು ಯಾರಂದರೆ, ಕೂಷ್‌ ಮಿಚ್ರಯಿಮ್‌ ಪೂತ್‌ ಕಾನಾನ್‌ ಎಂಬವರು.

ಆದಿಕಾಂಡ 10:21

ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.

ನ್ಯಾಯಾಧಿಪತಿಗಳು 21:22

ಅವರ ತಂದೆಗಳಾದರೂ ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯ ವಾಡುವದಕ್ಕೆ ಬಂದರೆ ನಾವು ಅವರಿಗೆ--ಯುದ್ದದಲ್ಲಿ ನಾವು ಅವನಿಗೆ ಹೆಂಡತಿಯನ್ನು ತಕ್ಕೊಳ್ಳದ ಕಾರಣ ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಯಾಕಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ ಅಂದರು.

1 ದಿನವೃತ್ತಾಂತ 1:4

ನೋಹನು, ಶೇಮನು, ಹಾಮನು, ಮತ್ತು ಯೆಫೆತನು,

ಹೆಬ್ರಿಯರಿಗೆ 11:7

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.

1 ಪೇತ್ರ 3:20

ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.

2 ಪೇತ್ರ 2:5

ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.

Interlinear

Choose Theme