Home Bibles ಆದಿಕಾಂಡ 7:16 · ಕನ್ನಡ ಬೈಬಲ್
ಆದಿಕಾಂಡ 7:16 · ಕನ್ನಡ ಬೈಬಲ್

ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.

Cross references

ಆದಿಕಾಂಡ 7:2

ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.

ಆದಿಕಾಂಡ 7:5

ಕರ್ತನು ತನಗೆ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು.

ಆದಿಕಾಂಡ 7:9

ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.

ದ್ವಿತೀಯೋಪದೇಶಕಾಂಡ 33:27

ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.

2 ಅರಸುಗಳು 4:4

ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು.

ಯೋಬ 12:14

ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.

ಕೀರ್ತನೆಗಳು 46:2

ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ

ಕೀರ್ತನೆಗಳು 91:1

ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.

ಸಾಮೇತಿಗಳು 3:23

ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.

ಮತ್ತಾಯ 25:10

ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.

ಲೂಕ 13:25

ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.

ಯೋಹಾನ 10:27

ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.

1 ಪೇತ್ರ 1:5

ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.

Interlinear

Choose Theme