Home Genesis 8 · ಕನ್ನಡ ಬೈಬಲ್

Genesis

Chapter 8

ಕನ್ನಡ ಬೈಬಲ್
1ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
2ಅಗಾಧದ ಬುಗ್ಗೆಗಳೂ ಆಕಾಶದ ಕಿಟಕಿಗಳೂ ಮುಚ್ಚಲ್ಪಟ್ಟವು. ಇದಲ್ಲದೆ ಆಕಾಶದಿಂದ ಬೀಳುವ ಮಳೆಯೂ ನಿಂತಿತು.
3ಹೀಗೆ ಭೂಮಿಯ ಮೇಲಿದ್ದ ಜಲವು ಕ್ರಮವಾಗಿ ತಗ್ಗಿಹೋಯಿತು. ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆ ಯಾಯಿತು.
4ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್‌ ಬೆಟ್ಟಗಳ ಮೇಲೆ ನೆಲೆಸಿತ್ತು.
5ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು.
6ನಾಲ್ವತ್ತು ದಿವಸಗಳಾದ ತರುವಾಯ ಆದದ್ದೇ ನಂದರೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು
7ಒಂದು ಕಾಗೆಯನ್ನು ಹೊರಗೆ ಬಿಟ್ಟನು; ಅದು ಹೊರಟು ಭೂಮಿಯ ಮೇಲಿದ್ದ ಜಲವು ಆರಿಹೋಗುವ ವರೆಗೆ ಹೋಗುತ್ತಾ ಬರುತ್ತಾ ಇತ್ತು.
8ಭೂಮುಖದ ಮೇಲೆ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ನೋಡುವಂತೆ ಒಂದು ಪಾರಿವಾಳವನ್ನು ಬಿಟ್ಟನು.
9ಆದರೆ ನೀರು ಭೂಮುಖದಲ್ಲೆಲ್ಲಾ ಇದ್ದದ್ದರಿಂದ ಪಾರಿವಾಳದ ಅಂಗಾಲಿಗೆ ವಿಶ್ರಮಿಸುವದಕ್ಕೆ ಸ್ಥಳವು ಸಿಕ್ಕದೆ ಅದು ತಿರಿಗಿ ಅವನ ಬಳಿಗೆ ನಾವೆಗೆ ಬಂತು. ಅವನು ಕೈಚಾಚಿ ಅದನ್ನು ಹಿಡಿದು ನಾವೆಯೊಳಗೆ ಸೇರಿಸಿ ಕೊಂಡನು.
10ಅವನು ಇನ್ನು ಏಳು ದಿನಗಳಾದ ಮೇಲೆ ತಿರಿಗಿ ನಾವೆಯೊಳಗಿಂದ ಪಾರಿವಾಳವನ್ನು ಬಿಟ್ಟನು.
11ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ, ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು; ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು.
12ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ.
13ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆದದ್ದೇನಂದರೆ, ನೀರು ಭೂಮಿಯ ಮೇಲಿನಿಂದ ಒಣಗಿಹೋಗಿತ್ತು. ನೋಹನು ನಾವೆಯ ಮುಚ್ಚಳವನ್ನು ತೆಗೆದು ನೋಡಲಾಗಿ, ಇಗೋ, ಭೂಮಿಯು ಒಣಗಿಹೋಗಿತ್ತು.
14ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.
15ಆಗ ದೇವರು ನೋಹನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
16ನೀನೂ ನಿನ್ನ ಸಂಗಡ ನಿನ್ನ ಹೆಂಡತಿಯೂ ನಿನ್ನ ಕುಮಾರರೂ ಅವರ ಹೆಂಡತಿ ಯರೂ ನಾವೆಯೊಳಗಿಂದ ಹೊರಗೆ ಹೋಗಿರಿ.
17ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.
18ಆಗ ನೋಹನ ಸಂಗಡ ಅವನ ಹೆಂಡತಿ ಕುಮಾರರು ಸೊಸೆಯರು ಹೊರಗೆ ಬಂದರು.
19ಎಲ್ಲಾ ಮೃಗಗಳೂ ಕ್ರಿಮಿಗಳೂ ಪಕ್ಷಿಗಳೂ ಭೂಮಿ ಯಲ್ಲಿ ಹರಿದಾಡುವ ಎಲ್ಲವುಗಳು ತಮ್ಮತಮ್ಮ ಜಾತ್ಯಾ ನುಸಾರವಾಗಿ ನಾವೆಯೊಳಗಿಂದ ಹೊರಬಂದವು.
20ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
22ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
Bible Study with Steffi App

Memorize verses with spaced repetition. Free, no ads, 15+ languages.

Download Free ↗

Choose Theme