ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ.
Cross references
ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.
ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?
ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.