ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.
Cross references
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು.
ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.
ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ.
ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.