Home Bibles ಹಬಕ್ಕೂಕ 3:11 · ಕನ್ನಡ ಬೈಬಲ್
ಹಬಕ್ಕೂಕ 3:11 · ಕನ್ನಡ ಬೈಬಲ್

ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.

Cross references

ಯೆಹೋಶುವ 10:11

ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್‌ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.

ಯೆಹೋಶುವ 10:13

ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.

ಕೀರ್ತನೆಗಳು 18:12

ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.

ಕೀರ್ತನೆಗಳು 19:4

ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.

ಕೀರ್ತನೆಗಳು 77:17

ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.

ಕೀರ್ತನೆಗಳು 144:5

ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.

ಯೆಶಾಯ 28:21

ಕರ್ತನು ಪೆರಾಚೀಮ್‌ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್‌ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.

ಯೆಶಾಯ 38:8

ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.

Interlinear

Choose Theme