Home Bibles ಹಬಕ್ಕೂಕ 3:5 · ಕನ್ನಡ ಬೈಬಲ್
ಹಬಕ್ಕೂಕ 3:5 · ಕನ್ನಡ ಬೈಬಲ್

ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು.

Cross references

ನಿರ್ಗಮಕಾಂಡ 12:29

ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.

ಲೇವ್ಯಕಾಂಡ 26:25

ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.

ಅಂಕೆಗಳ ಪುಸ್ತಕ 14:12

ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.

ಅಂಕೆಗಳ ಪುಸ್ತಕ 16:46

ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 32:24

ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.

ಕೀರ್ತನೆಗಳು 18:7

ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;

ಕೀರ್ತನೆಗಳು 78:50

ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ

ನಹೂಮ 1:2

ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.

Interlinear

Choose Theme