ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು.
Cross references
ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.
ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?