Home Bibles ಹಗ್ಗಾಯ 2:13 · ಕನ್ನಡ ಬೈಬಲ್
ಹಗ್ಗಾಯ 2:13 · ಕನ್ನಡ ಬೈಬಲ್

ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.

Cross references

ಲೇವ್ಯಕಾಂಡ 22:4

ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು

ಅಂಕೆಗಳ ಪುಸ್ತಕ 5:2

ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸು.

ಅಂಕೆಗಳ ಪುಸ್ತಕ 9:6

ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.

ಅಂಕೆಗಳ ಪುಸ್ತಕ 19:11

ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

ಅಂಕೆಗಳ ಪುಸ್ತಕ 19:22

ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.

ಸಭಾಪ್ರಸಂಗಿ 10:1

ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.

Interlinear

Choose Theme