Home Bibles ಹಗ್ಗಾಯ 2:8 · ಕನ್ನಡ ಬೈಬಲ್
ಹಗ್ಗಾಯ 2:8 · ಕನ್ನಡ ಬೈಬಲ್

ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

Cross references

1 ಅರಸುಗಳು 6:20

ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.

1 ದಿನವೃತ್ತಾಂತ 29:14

ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.

ಯೋಬ 41:3

ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?

ಕೀರ್ತನೆಗಳು 24:1

ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.

ಕೀರ್ತನೆಗಳು 50:10

ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.

ಯೆಶಾಯ 60:13

ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.

ಯೆಶಾಯ 60:17

ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು.

Interlinear

Choose Theme