ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
Cross references
ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.
ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು.
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು.
ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್‌ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.
ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು.
ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.
ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.