Home Bibles ಹೆಬ್ರಿಯರಿಗೆ 11:15 · ಕನ್ನಡ ಬೈಬಲ್
ಹೆಬ್ರಿಯರಿಗೆ 11:15 · ಕನ್ನಡ ಬೈಬಲ್

ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು.

Cross references

ಆದಿಕಾಂಡ 11:31

ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್‌ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್‌ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.

ಆದಿಕಾಂಡ 12:10

ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.

ಆದಿಕಾಂಡ 24:6

ಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು.

ಆದಿಕಾಂಡ 31:18

ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್‌ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್‌ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.

ಆದಿಕಾಂಡ 32:9

ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,

Interlinear

Choose Theme