ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
Cross references
ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.
ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.
ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್ ಬಂಡೆಯ ಮೇಲೆ ವಾಸವಾಗಿದ್ದನು.
ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.
ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು.
ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.
ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು ಅವನ ಮುಂದೆ--ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣ ವನ್ನು ತೆಗೆಯುವ ಹಾಗೆ ನಾನು ಅವನಿಗೆ ಮಾಡಿದ ಪಾಪವೇನು ಅಂದನು.
ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.
ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್‌ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.
ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.
ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು.
ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
ಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು.
ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?
ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್‌ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.