Cross references
ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.