Home Bibles ☰ Books ಹೆಬ್ರಿಯರಿಗೆ 6:14 · ಕನ್ನಡ ಬೈಬಲ್
ಹೆಬ್ರಿಯರಿಗೆ 6:14 · ಕನ್ನಡ ಬೈಬಲ್

ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.

Cross references

ಆದಿಕಾಂಡ 17:2

ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು.

ಆದಿಕಾಂಡ 22:17

ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.

ಆದಿಕಾಂಡ 48:4

ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.

ನಿರ್ಗಮಕಾಂಡ 32:13

ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.

ದ್ವಿತೀಯೋಪದೇಶಕಾಂಡ 1:10

ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.

ನೆಹೆಮ್ಯ 9:23

ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;

Interlinear

Choose Theme