ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
Cross references
ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.
ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.
ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.