Home Bibles ☰ Books ಹೊಶೇಯ 12:11 · ಕನ್ನಡ ಬೈಬಲ್
ಹೊಶೇಯ 12:11 · ಕನ್ನಡ ಬೈಬಲ್

ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.

Cross references

ಅಂಕೆಗಳ ಪುಸ್ತಕ 12:6

ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.

1 ಅರಸುಗಳು 17:1

ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.

2 ಅರಸುಗಳು 17:9

ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.

2 ಅರಸುಗಳು 17:13

ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.

ಯೆರೆಮಿಯ 2:20

ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.

ಯೆರೆಮಿಯ 2:28

ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.

ಯೆರೆಮಿಯ 10:8

ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.

ಯೆರೆಮಿಯ 10:15

ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.

ಯೆಹೆಜ್ಕೇಲ 17:2

ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನು ಒಗಟಾಗಿ ಹೇಳು.

ಹೊಶೇಯ 4:15

ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.

ಹೊಶೇಯ 6:8

ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.

ಹೊಶೇಯ 8:11

ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.

ಹೊಶೇಯ 9:15

ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ.

ಹೊಶೇಯ 10:1

ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.

ಆಮೋಸ 4:4

ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.

Interlinear

Choose Theme