Home Bibles ಹೊಶೇಯ 12:4 · ಕನ್ನಡ ಬೈಬಲ್
ಹೊಶೇಯ 12:4 · ಕನ್ನಡ ಬೈಬಲ್

ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.

Cross references

ಆದಿಕಾಂಡ 25:26

ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.

ಆದಿಕಾಂಡ 28:11

ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.

ಆದಿಕಾಂಡ 32:9

ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,

ಆದಿಕಾಂಡ 32:25

ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.

ಆದಿಕಾಂಡ 32:29

ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.

ಆದಿಕಾಂಡ 35:9

ಯಾಕೋಬನು ಪದ್ದನ್‌ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.

ಆದಿಕಾಂಡ 35:15

ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್‌ ಎಂದು ಹೆಸರಿಟ್ಟನು.

ಆದಿಕಾಂಡ 48:15

ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,

ನಿರ್ಗಮಕಾಂಡ 3:2

ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.

ಕೀರ್ತನೆಗಳು 66:6

ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.

ಯೆಶಾಯ 63:9

ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.

ಮಲಾಕಿ 3:1

ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.

ಅಪೋಸ್ತಲರ ಕೃತ್ಯಗಳು 7:30

ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.

1 ತೆಸಲೋನಿಕದವರಿಗೆ 4:17

ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.

ಹೆಬ್ರಿಯರಿಗೆ 5:7

ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.

ಹೆಬ್ರಿಯರಿಗೆ 6:13

ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--

Interlinear

Choose Theme