Home Bibles ಹೊಶೇಯ 2:21 · ಕನ್ನಡ ಬೈಬಲ್
ಹೊಶೇಯ 2:21 · ಕನ್ನಡ ಬೈಬಲ್

ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು.

Cross references

ಯೆಶಾಯ 55:10

ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,

ಯೆಶಾಯ 62:4

ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.

ಯೆಶಾಯ 62:5

ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.

ಯೆಶಾಯ 65:24

ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.

ಜೆಕರ್ಯ 8:8

ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.

ಜೆಕರ್ಯ 8:12

ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.

ಜೆಕರ್ಯ 13:9

ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.

ಮತ್ತಾಯ 6:33

ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

ರೋಮಾಪುರದವರಿಗೆ 8:32

ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?

1 ಕೊರಿಂಥದವರಿಗೆ 3:21

ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;

Interlinear

Choose Theme