Home Bibles ☰ Books ಹೊಶೇಯ 4:3 · ಕನ್ನಡ ಬೈಬಲ್
ಹೊಶೇಯ 4:3 · ಕನ್ನಡ ಬೈಬಲ್

ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.

Cross references

ಯೆಶಾಯ 24:4

ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು.

ಯೆಶಾಯ 33:9

ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್‌ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್‌ ಬೆಂಗಾ ಡಾಗಿದೆ. ಬಾಷಾನ್‌ ಮತ್ತು ಕರ್ಮೆಲ್‌ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.

ಯೆರೆಮಿಯ 4:25

ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.

ಯೆರೆಮಿಯ 4:27

ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.

ಯೆರೆಮಿಯ 4:28

ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;

ಯೆರೆಮಿಯ 9:9

ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.

ಯೆರೆಮಿಯ 12:4

ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್‌ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು.

ಯೆಹೆಜ್ಕೇಲ 38:20

ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.

ಯೋವೇಲ 1:10

ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.

ಆಮೋಸ 1:2

ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.

ಆಮೋಸ 5:16

ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.

ಆಮೋಸ 8:8

ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು.

ನಹೂಮ 1:4

ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.

ಸೆಫನ್ಯ 1:3

ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.

Interlinear

Choose Theme