Home Bibles ಹೊಶೇಯ 7:12 · ಕನ್ನಡ ಬೈಬಲ್
ಹೊಶೇಯ 7:12 · ಕನ್ನಡ ಬೈಬಲ್

ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.

Cross references

ಲೇವ್ಯಕಾಂಡ 26:14

ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ

ದ್ವಿತೀಯೋಪದೇಶಕಾಂಡ 28:15

ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

ದ್ವಿತೀಯೋಪದೇಶಕಾಂಡ 29:22

ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ

ದ್ವಿತೀಯೋಪದೇಶಕಾಂಡ 31:16

ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.

ದ್ವಿತೀಯೋಪದೇಶಕಾಂಡ 32:15

ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.

2 ಅರಸುಗಳು 17:13

ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.

ಯೋಬ 19:6

ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.

ಸಭಾಪ್ರಸಂಗಿ 9:12

ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.

ಯೆರೆಮಿಯ 16:16

ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.

ಯೆರೆಮಿಯ 44:4

ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.

ಯೆಹೆಜ್ಕೇಲ 12:13

ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.

ಯೆಹೆಜ್ಕೇಲ 17:20

ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.

ಯೆಹೆಜ್ಕೇಲ 32:3

ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.

ಹೊಶೇಯ 5:9

ಎಫ್ರಾಯಾಮು ಗದರಿಸುವ ದಿನದಲ್ಲೇ ಹಾಳಾಗುವದು. ಇಸ್ರಾಯೇ ಲಿನ ಗೋತ್ರಗಳಲ್ಲಿ ನಾನು ನಿಜವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.

ಪ್ರಕಟನೆ 3:19

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.

Interlinear

Choose Theme