ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.
Cross references
ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ.
ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.