Home Bibles ಹೊಶೇಯ 8:12 · ಕನ್ನಡ ಬೈಬಲ್
ಹೊಶೇಯ 8:12 · ಕನ್ನಡ ಬೈಬಲ್

ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.

Cross references

ದ್ವಿತೀಯೋಪದೇಶಕಾಂಡ 4:6

ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.

2 ಅರಸುಗಳು 17:15

ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.

ನೆಹೆಮ್ಯ 9:13

ಸೀನಾಯ್‌ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.

ನೆಹೆಮ್ಯ 9:26

ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.

ಕೀರ್ತನೆಗಳು 50:17

ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.

ಕೀರ್ತನೆಗಳು 119:18

ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.

ಕೀರ್ತನೆಗಳು 147:19

ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.

ಸಾಮೇತಿಗಳು 22:20

ಸತ್ಯದ ಮಾತುಗಳ ಸ್ಥಿರತೆಯನ್ನು ನಾನು ನಿನಗೆ ತಿಳಿಯಪಡಿಸುವಂತೆಯೂ ನಿನ್ನ ಕಡೆಗೆ ಕಳುಹಿ ಸಿದವರಿಗೆ

ಯೆಶಾಯ 30:9

ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.

ಯೆರೆಮಿಯ 6:16

ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.

ಯೆಹೆಜ್ಕೇಲ 20:11

ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.

ಹೊಶೇಯ 4:6

ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.

ರೋಮಾಪುರದವರಿಗೆ 3:1

ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?

ರೋಮಾಪುರದವರಿಗೆ 7:12

ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.

Interlinear

Choose Theme