Home Bibles ಹೊಶೇಯ 8:3 · ಕನ್ನಡ ಬೈಬಲ್
ಹೊಶೇಯ 8:3 · ಕನ್ನಡ ಬೈಬಲ್

ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು.

Cross references

ಲೇವ್ಯಕಾಂಡ 26:36

ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.

ದ್ವಿತೀಯೋಪದೇಶಕಾಂಡ 28:25

ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.

ಕೀರ್ತನೆಗಳು 36:3

ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.

ಕೀರ್ತನೆಗಳು 81:10

ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.

ವಿಲಾಪಗಳು 3:66

ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.

ವಿಲಾಪಗಳು 4:19

ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.

ಆಮೋಸ 1:11

ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.

1 ತಿಮೋಥೆಯ 5:12

ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ತೊರೆದು ದಂಡನೆಗೆ ಗುರಿಯಾಗಿದ್ದಾರೆ.

Interlinear

Choose Theme