Home Bibles ಹೊಶೇಯ 8:7 · ಕನ್ನಡ ಬೈಬಲ್
ಹೊಶೇಯ 8:7 · ಕನ್ನಡ ಬೈಬಲ್

ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.

Cross references

ಆದಿಕಾಂಡ 41:23

ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.

ದ್ವಿತೀಯೋಪದೇಶಕಾಂಡ 28:33

ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.

ನ್ಯಾಯಾಧಿಪತಿಗಳು 6:3

ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು

2 ಅರಸುಗಳು 13:3

ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.

2 ಅರಸುಗಳು 15:19

ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.

2 ಅರಸುಗಳು 15:29

ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.

ಯೋಬ 4:8

ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.

ಸಾಮೇತಿಗಳು 22:8

ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.

ಸಭಾಪ್ರಸಂಗಿ 5:16

ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?

ಯೆಶಾಯ 17:11

ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.

ಯೆಶಾಯ 66:15

ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.

ಯೆರೆಮಿಯ 12:13

ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.

ಹೊಶೇಯ 2:9

ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು.

ಹೊಶೇಯ 7:9

ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.

ಹೊಶೇಯ 10:12

ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.

ಹೊಶೇಯ 10:13

ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.

ನಹೂಮ 1:3

ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.

ಗಲಾತ್ಯದವರಿಗೆ 6:7

ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.

Interlinear

Choose Theme