Home Bibles ☰ Books ಯೆಶಾಯ 1:20 · ಕನ್ನಡ ಬೈಬಲ್
ಯೆಶಾಯ 1:20 · ಕನ್ನಡ ಬೈಬಲ್

ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.

Cross references

ನಿರ್ಗಮಕಾಂಡ 9:2

ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆ

ಲೇವ್ಯಕಾಂಡ 26:25

ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.

ಲೇವ್ಯಕಾಂಡ 26:33

ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.

ಅಂಕೆಗಳ ಪುಸ್ತಕ 23:19

ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?

1 ಸಮುವೇಲ 12:25

ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.

1 ಸಮುವೇಲ 15:29

ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.

2 ದಿನವೃತ್ತಾಂತ 36:14

ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.

ಯೋಬ 36:12

ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.

ಯೆಶಾಯ 3:11

ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.

ಯೆಶಾಯ 3:25

ನಿನ್ನ ಗಂಡಸರು ಕತ್ತಿಯಿಂದಲೂ ನಿನ್ನ ಶೂರರು ಯುದ್ಧದಲ್ಲಿಯೂ ಬೀಳುವರು.ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.

ಯೆಶಾಯ 40:5

ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.

ಯೆಶಾಯ 58:14

ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.

ಯೆಶಾಯ 65:12

ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.

ಮೀಕ 4:4

ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.

Interlinear

Choose Theme