Home Bibles ಯೆಶಾಯ 10:23 · ಕನ್ನಡ ಬೈಬಲ್
ಯೆಶಾಯ 10:23 · ಕನ್ನಡ ಬೈಬಲ್

ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.

Cross references

ಕೀರ್ತನೆಗಳು 46:9

ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.

ಯೆಶಾಯ 14:26

ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.

ಯೆಶಾಯ 24:1

ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.

ಯೆಶಾಯ 28:22

ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.

ದಾನಿಯೇಲ 4:35

ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.

ದಾನಿಯೇಲ 9:27

ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.

ದಾನಿಯೇಲ 11:36

ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.

ರೋಮಾಪುರದವರಿಗೆ 9:28

ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.

Interlinear

Choose Theme