ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
Cross references
ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು.
ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು.ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್‌ಹದ್ದೋನನು ಆಳಿದನು.
ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.
ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.