ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
Cross references
ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.
ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.
ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.