Home Bibles ☰ Books ಯೆಶಾಯ 14:10 · ಕನ್ನಡ ಬೈಬಲ್
ಯೆಶಾಯ 14:10 · ಕನ್ನಡ ಬೈಬಲ್

ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು.

Cross references

ಕೀರ್ತನೆಗಳು 49:6

ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.

ಕೀರ್ತನೆಗಳು 49:20

ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.

ಕೀರ್ತನೆಗಳು 82:6

ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.

ಸಭಾಪ್ರಸಂಗಿ 2:16

ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?

ಯೆಹೆಜ್ಕೇಲ 32:21

ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ.

ಲೂಕ 16:20

ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.

Interlinear

Choose Theme