ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
Cross references
ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?
ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?
ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.
ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?